23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) (CBK) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಸಿಬಿಕೆ ಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ. ಎ. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ , ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಏಕತೆ, ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಸಮಾಜಮುಖಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ. ಟಿ. ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸ್ವಾತಂತ್ರ್ಯದ ಮಹತ್ವವನ್ನು ಅರಿತು ದೇಶದ ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಗೌರವ ಸಲಹೆಗಾರರಾದ ಜೋಸೆಫ್ ಕೆ. ಡಿ. ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ದೇಶದ ಪ್ರಗತಿಗೆ ಯುವಜನರು ಹಾಗೂ ಸಮಾಜದ ಪ್ರತಿಯೊಬ್ಬರೂ ಸಕಾರಾತ್ಮಕವಾಗಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ರಂಜಿತ್ ಪಿ. ಎಸ್., ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸಿಬಿಕೆ ಸದಸ್ಯರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya
error: Content is protected !!