23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ : ಇಲ್ಲಿಯ ಚಂದ್ರಗಿರಿ ನಗರ ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದ ಮೂಲಕ ಮಾಜಿ ಸೈನಿಕ ರವಿಪ್ರಸಾದ್ ರವರು ನೆರವೇರಿಸಿದರು.

ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದ ರವಿಪ್ರಸಾದ್ ರವರು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು. ನಂತರ ಬಾಲ ವಿಕಾಸ ಸಮಿತಿ ವತಿಯಿಂದ ಗೌರವಿಸಲಾಯಿತು.

ಬಾಲ ವಿಕಾಸ ಸಮಿತಿಯ ಗೌರವ ಸಲಹೆಗಾರರಾದ ಸಾಂಸ್ಕೃತಿಕ ಸಂಘಟಕರಾದ ಬಿ, ಭುಜಬಲಿ, ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಸವಿತಾ ಮಂಜುನಾಥ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಶರ್ಮಿಳ ಹರ್ಷ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೇವತಿ, ಮುಖ್ಯ ಸಲಹೆಗಾರ ಸುರೇಶ ಗೌಡ , ಪ್ರವೀಣ್ ದೇವಾಡಿಗ, ಸುಭಾಷ್ ಚಂದ್ರ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸಂಧ್ಯಾರವರು ದೇಶಭಕ್ತಿ ಗೀತೆ ಹಾಡಿದರು. ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹರ್ಷ ಜೈನ್ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಿದರು. ಗ್ರಾಮ ಪಂಚಾಯತ್ ಮತ್ತು ಸುಭಾಷ್ ಚಂದ್ರ ಜೈನ್ ಚಂದ್ರಗಿರಿ ನಗರ ಇವರ ವತಿಯಿಂದ ಸಿಹಿತಿಂಡಿಯನ್ನು ಎಲ್ಲರಿಗೂ ನೀಡಿದರು.


ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು, ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆ ಶ್ರೀಮತಿ ಮಲ್ಲಿಕಾ, ಸಹಾಯಕಿ ಭಾಗ್ಯ, ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿಗಳನ್ನು ಅಂಗನವಾಡಿ ಕಾರ್ಯಕರ್ತೆ ಬಿಂದು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya
error: Content is protected !!