31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಂಗ ಇಲಾಖೆ ಮತ್ತು ವಕೀಲರ ಬೆಳ್ತಂಗಡಿ ಇವರ ಜಂಟಿ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾದೀಶರಾದ ಮನು ಬಿ ಕೆ ಯವರು ಸ್ವಾತಂತ್ರಕ್ಕಾಗಿ ಹೋರಾಡಿದ ಮಹನಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ದೇಶ ನಮಗೇನು ಕೊಟ್ಟಿದೆ ಎನ್ನುವುದರ ಬದಲು ದೇಶಕ್ಕೆ ನಾವು ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ನಾವು ನಾಗರೀಕರು ಕರ್ತವ್ಯಗಳನ್ನು ಪಾಲಿಸುವ ಮೂಲಕ ದೇಶದ ಪ್ರಗತಿಗೆ ಕಾರಣಕರ್ತರಾಗಬೇಕು ಎಂದು ಹೇಳಿದರು. ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಧೀಶರಾಗ ರಾಮಲಿಂಗಪ್ಪರವರು ಸ್ವಾತಂತ್ರ್ಯ ಹೋರಾಟದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವಾರು ಮಹನೀಯರು ಭಾಗವಹಿಸಿರುವುದನ್ನು ಸ್ಮರಿಸಿದರು.

ಸ್ವಾತಂತ್ರ್ಯೋತ್ಸವದ ಕುರಿತಾಗಿ ಯುವ ನ್ಯಾಯವಾದಿ ಪ್ರತೀಕ್ಷರವರು ವಿಶೇಷ ಉಪನ್ಯಾಸಗೈದು ದೇಶದ ಏಕತೆಗಾಗಿ ಜಾತಿ ಮತ ಧರ್ಮ ಬೇಧವನ್ನು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅದ್ಯಕ್ಷ ಅಲೋಸಿಯಸ್ ಎಸ್ ಲೋಬೋ ವಹಿಸಿದ್ದರು.

ವೇದಿಕೆಯಲ್ಲಿ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾದೀಶರಾದ ಶಶಾಂಕ ನಾಗೇಂದ್ರ ಭಟ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಎಂ, ಹಿರಿಯ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ಎಸ್ ಎಂ ಮತ್ತು ಕೋಶಾಧಿಕಾರಿ ಮುಮ್ತಾಜ್ ಬೇಗಂ ಉಪಸ್ಥಿತರಿದ್ದರು. ಸ್ಥಳೀಯ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ವಕೀಲರುಗಳಾದ ಅಕ್ಷಯ ಟಿ ರಾವ್, ಪ್ರತೀಕ್ಷಾ, ಮನಿಷಾ, ಶ್ರಾವ್ಯ, ಹೇಮಲತಾ ಮತ್ತು ಅನುಜ್ನಾ ಸಾಲಿಯಾನ್ ವಂದೇಮಾತರಂ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಎಂ ಸ್ವಾಗತಿಸಿ, ಕೋಶಾಧಿಕಾರಿ ಮುಮ್ತಾಜ್ ಬೇಗಂ ವಂದಿಸಿದರು. ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಮತ್ತು ಜತೆ ಕಾರ್ಯದರ್ಶಿ ಹರ್ಷಿತ್ ಜಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!