23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರುವ ಶುಭ ಸಂದೇಶವನ್ನು ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕ ಚಂದ್ರಶೇಖರ, ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶ್ರೀರಾಮ್ ಫೈನಾನ್ಸ್ ಮ್ಯಾನೇಜರ್ ಶರತ್, ಕೇಂದ್ರ ಕಚೇರಿಯ ಮುಖ್ಯ ಲೆಕ್ಕಿಗ ಕೀರ್ತನ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ರೂಪಲತಾ, ಮಾರಾಟಾಧಿಕಾರಿ ಶಿವಪ್ರಕಾಶ್, ವಿವಿಧ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya
error: Content is protected !!