28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಆ.14 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ. ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ.

ಆರೋಪಿ, ಅವ್ವಮ್ಮ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ (45) ಅವರು ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 309(6) BNS-2023ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!