23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ನಿ.) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನೂ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಸಹಕಾರಿ ಕ್ಷೇತ್ರವು ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಂಘದ ಸದಸ್ಯರು ಮತ್ತು ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು ರತ್ನಾಕರ ಬರ್ಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ನಿರ್ದೇಶಕರು,
ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್ ಮಹಮ್ಮದ, ಮೂಡುಕೋಡಿ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಶಾಂತ್ ಗೌಡ ಹಾಗೂ ಸಿಬ್ಬಂದಿಗಳು ಸದಸ್ಯರು, ಗ್ರಾಹಕರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿ ಲೆಕ್ಕಿಗ ಭರತ್ ರಾಜ್ ವಂದಿಸಿದರು.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!