31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಿಯೋನ್ ಆಶ್ರಮದ ಚಾಪ್ಲಿಯನ್ ರೆ. ಫಾ. ಡಾ. ಮೆಲ್ವಿನ್ ಡಿ’ಸಿಲ್ವಾ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಬ್ರಿಟಿಷರ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದ ಐತಿಹಾಸಿಕ ಹೋರಾಟವನ್ನು ಸಂಕ್ಷಿಪ್ತವಾಗಿ ವಿವರಿಸಿದ ಅವರು, ಪರಸ್ಪರ ಪ್ರೀತಿ, ನಂಬಿಕೆ ಮತ್ತು ಒಗ್ಗಟ್ಟಿನಿಂದ ಬದುಕುವ ಮೂಲಕ ದೇಶದ ಏಕತೆ ಹಾಗೂ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಕರೆ ನೀಡಿದರು. ರಾಷ್ಟ್ರಧ್ವಜವು ನಮ್ಮ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದ್ದು, ಅದು ಹಾರುವ ಪ್ರತಿಯೊಂದು ಕ್ಷಣವೂ ನಮ್ಮಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಲಿ ಎಂದು ಸಂದೇಶ ನೀಡಿದರು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ ಎಂದರು. ಸ್ವಾತಂತ್ರ್ಯವೆಂದರೆ ಕೇವಲ ಬಂಧನಗಳಿಂದ ಮುಕ್ತಿ ಪಡೆಯುವುದಲ್ಲ ಅದು ಕರ್ತವ್ಯ, ಜವಾಬ್ದಾರಿ ಮತ್ತು ಮಾನವೀಯತೆಯನ್ನು ಅರಿತು ಬದುಕುವ ಅವಕಾಶ ಎಂದು ಹೇಳಿದರು. ದೇಶದ ಅಭಿವೃದ್ಧಿ ಸರ್ಕಾರದೊಂದೇ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಬಲಿಷ್ಠ ಹಾಗೂ ಅಭಿವೃದ್ಧಿಶೀಲ ಭಾರತ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ , ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. , ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ., ಸಂಸ್ಥೆಯ ಹಿತೈಷಿಗಳಾದ ಜೋಸೆಫ್ ಪಿ.ಪಿ.ಯವರು, ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು. ಆಶ್ರಮನಿವಾಸಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

Related posts

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya
error: Content is protected !!