28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

80ನೇ ಸ್ವಾತಂತ್ರ್ಯೋತ್ಸವದಲ್ಲಿ ಕಂಗೊಳಿಸಿದ ಬ್ರೈಟ್ ಹೊರೈಝನ್

ಕರಿಮಣೇಲು : ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಡಾ. ಶಾಂತಿಪ್ರಸಾದ್ ಅವರು ಗಣ್ಯರೊಂದಿಗೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ದಿನ ಇದಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸದಾ ಗೌರವಿಸಬೇಕು ಎಂದು ಹೇಳಿದರು.

ಶಾಲೆಯ ಟ್ರಸ್ಟಿ ರಂಜಿತ್ ಪೂಜಾರಿ ತೋಡಾರ್ ಮಾತನಾಡಿ, “ದೇಶದ ಮೂಲ ಶಕ್ತಿ ಯುವಕರು. ಮಕ್ಕಳು ಶಾಲೆಯಲ್ಲಿ ಕೇವಲ ಶೈಕ್ಷಣಿಕವಾಗಿ ಬೆಳೆಯುವುದಷ್ಟೇ ಅಲ್ಲದೆ, ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಇದೇ ಬ್ರೈಟ್ ಹೊರೈಝನ್ ಶಿಕ್ಷಣ ಸಂಸ್ಥೆಯ ಉದ್ದೇಶ” ಎಂದರು.

ಶಾಲೆಯ ಅಧ್ಯಕ್ಷ ಡಾ. ಶರತ್ ಗೋರೆ ಮಾತನಾಡಿ, ದೇಶಭಕ್ತಿ ಶಾಲೆಯಿಂದಲೇ ಆರಂಭವಾಗಬೇಕು. ನಮ್ಮ ಶಾಲೆಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಧರ್ಮಗಳ ಮಕ್ಕಳು ಒಟ್ಟಾಗಿ ಕಲಿಯುತ್ತಿದ್ದಾರೆ. ಹೀಗಾಗಿ ಇದು ಒಂದು ರೀತಿಯಲ್ಲಿ ಮಿನಿ ಇಂಡಿಯಾ ಇದ್ದಂತೆ. ದೇಶಕ್ಕೆ ಸ್ವಾತಂತ್ರ್ಯ ದೊರಕಲು ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗವನ್ನು ಮಕ್ಕಳು ಅರಿತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಶಾಲೆಯ ಕಾರ್ಯದರ್ಶಿ ಶಾಂಭವಿ ಗೋರೆ ಅವರು ಸ್ವಾತಂತ್ರ್ಯದ ಮಹತ್ವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕರಾಟೆ ಪ್ರದರ್ಶನ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ದೇಶಭಕ್ತಿಗೀತೆಗಳು ಮತ್ತು ಮಕ್ಕಳ ಭಾಷಣಗಳು ನಡೆದವು. ಕಾರ್ಯಕ್ರಮವು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಿತು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಡಾ. ಶಶಿಧರ್, ಶೈಕ್ಷಣಿಕ ಮುಖ್ಯಸ್ಥೆ ಜೇಸಿಂಥ ಡಿ ಕುನ್ನಾ, ಕ್ಯಾಂಪಸ್ ಹೆಡ್ ಪ್ರಖ್ಯಾತ್ ಭಂಡಾರಿ, ಸಾರಿಕ ಪೂಜಾರಿ, ದಾಮೋದರ ಪೂಜಾರಿ, ನಾಗೇಶ್ ಬಂಗೇರ, ರವೀಂದ್ರ ಶೆಟ್ಟಿ ಸೇರಿದಂತೆ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ತೀವ್ರ ನಿಗಾ ಆರೈಕೆಯಲ್ಲಿ ಪೌಷ್ಟಿಕ ಬೆಂಬಲದ ಮಹತ್ವ

Suddi Udaya
error: Content is protected !!