ಬೆಳ್ತಂಗಡಿ:ಅನುಗ್ರಹ ಟ್ರೈನಿಂಗ್ ಕಾಲೇಜು, ಬೆಳ್ತಂಗಡಿ ಮತ್ತು ಮುಡಿಪು ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ತಾಂತ್ರಿಕ, ವೃತ್ತಿಪರ ಹಾಗೂ ಪ್ರೊಫೆಷನಲ್ ಡಿಪ್ಲೋಮಾ ತರಬೇತಿಗಳ ಶಿಕ್ಷಣ ಸಂಸ್ಥೆಯಾಗಿರುವ ಅನುಗ್ರಹ ಟ್ರೈನಿಂಗ್ ಕಾಲೇಜಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೇರ್ಮನ್ ಎಂ. ಜಿ. ತಲ್ಹತ್ ಸವಣಾಲು ಅವರ ವಿಶೇಷ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಬೆಳ್ತಂಗಡಿ ಮತ್ತು ಮುಡಿಪು ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಯಶಸ್ವಿಗೆ ಸಂಸ್ಥೆಯ ನಿರ್ದೇಶಕರಾದ ಮೊಹಮ್ಮದ್ ತೌಸೀಫ್ ಕಕ್ಕಿಂಜೆ ಹಾಗೂ ಅಬ್ದುಲ್ ಖಾದರ್ ನಾವೂರು ಅವರು ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಿದರು.
ಬೆಳ್ತಂಗಡಿಯ ಶ್ರೀರಾಮ್ ಕಾಂಪ್ಲೆಕ್ಸ್, ಸಂತೆಕಟ್ಟೆಯಲ್ಲಿರುವ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ದೇಶಭಕ್ತಿ ಹಾಗೂ ದೇಶದ ಗೌರವದ ಭಾವನೆ ಬೆಳೆಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಅದೇ ರೀತಿ ಮುಡಿಪು ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಸಂಸ್ಥೆ ಕಾರ್ಯನಿರ್ವಹಿಸುತ್ತಿರುವ ಎಸ್.ಕೆ. ಟವರ್ ಕಟ್ಟಡದ ಅಂಗಡಿ ಮಾಲೀಕರು, ಉದ್ಯಮಿಗಳು ಹಾಗೂ ಉದ್ಯೋಗಿಗಳು ಮಾತ್ರವಲ್ಲದೆ, ಸ್ಥಳೀಯ ಆಟೋ ಚಾಲಕರು ಮತ್ತು ಮಾಲಕರ ಸಂಘದ ಸದಸ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಸಿಬ್ಬಂದಿ ವರ್ಗವು ಸಂಪೂರ್ಣ ಸಹಕಾರ ನೀಡಿತು. ಮುಡಿಪು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಗೌಡ ಸೋಣಂದೂರು, ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಹಾರೀಶ್ ಮಲಾರ್ ಹಾಗೂ ಬೆಳ್ತಂಗಡಿ ಸಂಸ್ಥೆಯ ಸಿಬ್ಬಂದಿಗಳಾದ ಫೈರ್ ಅಂಡ್ ಸೇಫ್ಟಿ ವಿಭಾಗದ ಅಂಕಿತ ಉಜಿರೆ, ಎಸಿ ಮತ್ತು ರೆಫ್ರಿಜರೇಷನ್ ಮೆಕ್ಯಾನಿಕ್ ವಿಭಾಗದ ಉಪನ್ಯಾಸಕ ಉಮೇಶ್ ನಡ, ಫ್ಯಾಶನ್ ಡಿಸೈನಿಂಗ್ ವಿಭಾಗದ ಶ್ರೇಯಾಂಕ ಚಾರ್ಮಾಡಿ ಹಾಗೂ ಸಫೀದ ಮುಡಿಪು ಸೇರಿದಂತೆ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
ವಿದ್ಯಾರ್ಥಿಗಳು ಕೂಡ ಕಾರ್ಯಕ್ರಮದ ಎಲ್ಲಾ ಹಂತಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣ ಸಹಕಾರ ನೀಡಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ಸ್ವಾತಂತ್ರ್ಯೋತ್ಸವ ಆಚರಣೆಗೆ ವಿಶೇಷ ಮೆರುಗು ನೀಡಿತು.












