23.7 C
ಪುತ್ತೂರು, ಬೆಳ್ತಂಗಡಿ
September 30, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಸ್ವಾತಂತ್ರ್ಯವೆ0ದರೆ ನಮಗೆ ಇಷ್ಟ ಬಂದ0ತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಕೆ.ವಿ. ಸುಬ್ಬಣ್ಣ ಬಯಲು ರಂಗಮ0ದಿರದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ಪಾಲಕರು, ಪೋಷಕರು ಹಾಗೂ ಊರಿನ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ‍್ಯೋತ್ತರ ಭಾರತದ ಸಾಧನೆ, ರಾಷ್ಟ್ರೀಯ ಭದ್ರತೆ, ಪ್ರಜಾಪ್ರಭುತ್ವ, ಸಂವಿಧಾನ, ವೈವಿಧ್ಯತೆಯಲ್ಲಿ ಏಕತೆ ಹಾಗೂ ದೇಶದ ಭವಿಷ್ಯ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ವಿವರವಾಗಿ ಮಾತನಾಡಿದರು.

ಅಜಯ್ ವಾರಿಯರ್ ತಂಡದ ವತಿಯಿಂದ ವಿಶೇಷ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜನಪ್ರಿಯ ದೇಶ ಭಕ್ತಿಗೀತೆಗಳು, ಸುಮಧುರ ಸಂಗೀತ ಹಾಗೂ ಮನಮೋಹಕ ಗಾಯನದ ಮೂಲಕ ಕಲಾವಿದರು ವಿದ್ಯಾರ್ಥಿಗಳನ್ನು ರಂಜಿಸಿದರು.

ಪ್ರತಿಷ್ಠಾನದ ವ್ಯವಸ್ಥಾಪಕ ಅಧ್ಯಕ್ಷ ಡಾ ಎಂ ಮೋಹನ ಆಳ್ವ,  ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ, ಆಡಳಿತ ಮಂಡಳಿಯ ಬಾಲಕೃಷ್ಣ ಆಳ್ವ,  ಡಾ ಹನ ಶೆಟ್ಟಿ, ಡಾ. ಗ್ರೀಷ್ಮಾ ಆಳ್ವ ಇದ್ದರು.

ಉಪನ್ಯಾಸಕರಾದ ವೇಣುಗೋಪಾಲ ಕೆ. ಶೆಟ್ಟಿ ಹಾಗೂ ಡಾ.ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಪರೇಡ್ ಕಮಾಂಡರ್ ಆಗಿ ಎನ್‌ಸಿಸಿ ಕೆಡೆಟ್ ಕ್ಯಾ. ಯದುನಂದನ್ ಹಾಗೂ  ಪಿಒ ಕೆಡೆಟ್ ಹಾರ್ದಿಕ್ ಹರ್ಷ ಶೆಟ್ಟಿ ವಂದಿಸಿದರು.

Related posts

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣಾವಕಾಶ ಬೆಳ್ತಂಗಡಿಯಲ್ಲಿ ನೂತನವಾಗಿ ಶುಭಾರಂಭಗೊಂಡ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಕೆಜಿ ಲೆಕ್ಕದಲ್ಲಿ ಮಕ್ಕಳ ಉಡುಪು ನೀಡುವ ಈ ಉದ್ಯಮ ಸಫಲವಾಗಲಿ – ರಕ್ಷಿತ್ ಶಿವಾರಂ

Suddi Udaya

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ ಸೇವಾ ಭಾರತಿಗೆ ಬೆಳ್ತಂಗಡಿಯ ಅಕ್ಷಯ ಇಂಪ್ರೆಶನ್ಸ್ ಮಾಲಕ ಯಶವಂತ ಪಟವರ್ಧನ್ ದಂಪತಿಗಳಿಂದ ರೂ‌.25 ಸಾವಿರ ದೇಣಿಗೆ

Suddi Udaya
error: Content is protected !!