31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಇಂದಬೆಟ್ಟು : ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ಕಛೇರಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಬಿ.ಪಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಇತ್ತೀಚೆಗೆ ಅಗಲಿದ ಪಂಚಾಯತ್ ಸಿಬ್ಬಂದಿ ಗೋಪಾಲ ಕೆ ಇವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ ಅವರ ನೆನಪಿಗಾಗಿ ಕಲ್ಪವೃಕ್ಷವನ್ನು ನೆಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಪ್ರಮೋದ್ ಕುಮಾರ್ ಬೆದ್ರಬೆಟ್ಟು, ಶ್ರೀಕಾಂತ್ ಎಸ್ ಇಂದಬೆಟ್ಟು, ಶ್ರೀಮತಿ ಹರಿಣಾಕ್ಷಿ, ವೀರಪ್ಪ ಮೊಯಿಲಿ, ದೇವನಾರಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಉಷಾ, ಎಸ್.ಡಿ.ಎಮ್ ಸಿ ಅಧ್ಯಕ್ಷ ನಾರಾಯಣ ಟಿ. ಸದಸ್ಯರು, ಸಹ ಶಿಕ್ಷಕರು, ಮಕ್ಕಳು, ಸುಧರ್ಮ ಆಟೋ ಚಾಲಕ ಮಾಲಕರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!