23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ‘ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮೆಲ್ಲರ ಮೇಲಿದೆ. ಅವರ ಕನಸನ್ನು ನನಸು ಮಾಡುವ ಕಡೆಗೆ ನಮ್ಮ ನಿರಂತರ ಪ್ರಯತ್ನ ಇರಬೇಕಾಗಿದೆ. ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು’ ಎಂದು ವಕೀಲ ಬಿ.ಎಂ.ಭಟ್ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶ್ರೀ ಗುರುದೇವ ವಿದ್ಯಾಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ವಸಂತ ಬಂಗೇರರು ಮರೆಯಲಾಗದ ಮಾಣಿಕ್ಯ. ನಿಜವಾದ ಸ್ವಾತಂತ್ರ್ಯವನ್ನು ಅವರು ಜನ ಸಾಮಾನ್ಯರ ಪಾಲಿಗೆ ನಿರಂತರವಾಗಿ ನೀಡುವ ಕಡೆಗೆ ಅವಿರತ ಹೋರಾಟವನ್ನು ಮಾಡುತ್ತಾ ಬಂದವರಾಗಿದ್ದರು ಎಂದ ಅವರು ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ನಮ್ಮ ವಿಚಾರಗಳಾಗಲಿ ಎಂದು ಕರೆ ನೀಡಿದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿ.ಸಿ. ಎ.ವಿದ್ಯಾರ್ಥಿನಿ ಸ್ವಾತಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಪ್ರಸ್ತಾವಿಸಿದರು. ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಪರಿಚಯಿಸಿ, ಗಣಕವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಸತೀಶ್ ಸಾಲಿಯಾನ್ ವಂದಿಸಿದರು. ಗಣಿತ ಶಾಸ್ತ್ರ ಉಪನ್ಯಾಸಕಿ ಮಾಯಾ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!