23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್‌ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ನಂತರ ಶಿಶಿಲೆಶ್ವರದೇ ದೇವಸ್ಥಾನದವರೆಗೆ ಮೆರವಣಿಗೆ ಮೂಲಕ ಮಕ್ಕಳನ್ನು ಕರೆದೊಯ್ಯಲಾಯಿತು ನಂತರ ನಡೆದ ಸಭಾ ಕಾರ್ಯಕ್ರಮ ಶಾಲಾ ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ರಮೇಶ್ ಬಂಗೇರ ಒಟ್ಲ ಹಾಗೂ ನಿವೃತ್ತ ಶಿಕ್ಷಕಿ ಸುಗುಣಕುಮಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರತ್ನ ಬಿ ಸ್ವಾಗತಿಸಿದರು. ಗೌರವ ಶಿಕ್ಷಕಿ ರಮ್ಯಾ ಬಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಸಂತೋಷ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಮಕ್ಕಳ ಪೋಷಕರು ಊರಿನ ಹಿರಿಯರು ಶೌರ್ಯ ವಿಪತ್ತು ತಂಡದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!