31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ. ಕೆ ಇವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ“ ಅನೇಕ ಜನರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸಂಭ್ರಮದಿಂದ ಸ್ವಾತಂತ್ರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಆ ಸ್ವಾತಂತ್ರದ ಘನತೆ, ಗೌರವವನ್ನು ನಾವು ಉಳಿಸಿ ಬೆಳೆಸಬೇಕಾಗಿದೆ ”ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಶಾಲೆಯ ಹಿತೈಷಿ ಮೌಸಿನ್, ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ , ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್, ಆಡಳಿತ ಮಂಡಳಿಯ ಸದಸ್ಯರಾದ ಶೇಕ್ ಅಬ್ದುಲ್ ಗಫೂರ್, ಸ್ಥಳೀಯರಾದ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಶಿಸ್ತುಬದ್ಧ ಪಥ ಸಂಚಲನದ ಮೂಲಕ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆಯನ್ನು ಸಲ್ಲಿಸಿದರು.ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ಪೋಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಾದ ಹಿಪ್ಝ ಬೇಗಂ ಮತ್ತು ಜಲಾಲುದ್ದಿನ್ ಮುನಾವ್ವರ್ ಕಾರ್ಯಕ್ರಮ ನಿರೂಪಿಸಿ, ಮದಿಯ ಅತಿಥಿಗಳನ್ನು ಸ್ವಾಗತಿಸಿದರು. ಮೊಹಮ್ಮದ್ ಸಾಬಿತ್ ಧನ್ಯವಾದ ಸಮರ್ಪಿಸಿದರು.

Related posts

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!