28.1 C
ಪುತ್ತೂರು, ಬೆಳ್ತಂಗಡಿ
September 30, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶ ಭಕ್ತಿಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರದ ಕುರಿತು ತಿಳಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯೋಗಕ್ಕೆ ನೀಡುತ್ತಿರುವ ಮಹತ್ವ ಹಾಗೂ ಪ್ರೋತ್ಸಾಹವನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಶೆಟ್ಟಿ, ಉಪಸ್ಥಿತರಿದ್ದರು, ಡಾ. ಬಾಲಕೃಷ್ಣ ಶೆಟ್ಟಿ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಡಾ. ಬಿ. ಗೀತಾ ಶೆಟ್ಟಿ ಅವರು ವಂದನಾರ್ಪಣೆ ಸಲ್ಲಿಸಿದರು.ಧರ್ಮೇಂದ್ರ ಅವರು ಕಾರ್ಯಕ್ರಮದ ನಿರೂಪಕರಾಗಿ  ಕಾರ್ಯಕ್ರಮ ನೆರವೇರಿಸಿ ಕೊಟ್ಟರು ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಮೆರುಗು ನೀಡಿದರು.

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

Suddi Udaya
error: Content is protected !!