31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಸಮಿತಿಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮವನ್ನು ದೇಶಭಕ್ತಿ ಹಾಗೂ ಸಡಗರದೊಂದಿಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ದೇಶದ ಏಕತೆ, ಸೌಹಾರ್ದತೆ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲ ಆ್ಯಂಟೋನಿ ಟಿ.ಪಿ. ಅವರು ಸ್ವಾತಂತ್ರ್ಯ ಪೂರ್ವದ ಹೋರಾಟ, ಸ್ವಾತಂತ್ರ್ಯಾನಂತರದ ಬೆಳವಣಿಗೆಗಳು ಹಾಗೂ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಪ್ರಮುಖ ವಿದ್ಯಮಾನಗಳ ಕುರಿತು ವಿವರವಾಗಿ ಬೆಳಕು ಚೆಲ್ಲಿದರು.ನಂತರ ಪಕ್ಷದ ಹಿರಿಯ ಕಾಂಗ್ರೆಸ್ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಟಣ ಗ್ರಾಮೀಣ ಸಮಿತಿ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ., ಸಮಿತಿ ಅಧ್ಯಕ್ಷ ಯೂಸುಫ್ ಪೆದಮಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತಾ ಪೂಜಾರಿ ಪಕ್ಷದ ಮುಖಂಡರಾದ ಲೋಕೇಶ್ವರಿ ವಿನಯಚಂದ್ರ ಗೌಡ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೋಭಾ ನಾರಾಯಣ ಗೌಡ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಅಝರ್ ನಾವುರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವದ ಮೌಲ್ಯಗಳು, ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡಿ, ಅಭಿವೃದ್ಧಿಯ ಹಾದಿಯಲ್ಲಿ ದೇಶವನ್ನು ಮುನ್ನಡೆಸಲು ಶ್ರಮಿಸುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ; ಶೇ. 15 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!