32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, ಅಂದಾಜು 5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ಗಾಯವಾಗಿತ್ತು.ಈ ಕುರಿತು ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 70/2026, ಕಲಂ 309(6) BNS-2023ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆ.16ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತೆಂಕಕಜೇಕಾರು ನಿವಾಸಿ ಹಾಗೂ ಅವ್ವಮ್ಮ ಅವರ ಮೊಮ್ಮಗ ಶಬೀರ್ (33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಎಎಸ್‌ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ಕಾರ್ಯನಿರ್ವಹಿಸಿದ್ದರು.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!