31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ “ಆಟಿದ ಪೊಲಬು”

ಬೆಳ್ತಂಗಡಿ: ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್‌ನಲ್ಲಿ ಆಚರಿಸಲಾಯಿತು.

ಕೆನರಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಶ್ರೀಮತಿ ತಾರಾ ರವರು ತೆಂಗಿನ ಕೊಂಬನ್ನು ಅರಳಿಸುವ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ ಇವತ್ತಿನ “ಆಟಿದ ಪೊಲಬು” ಕಾರ್ಯಕ್ರಮದಲ್ಲಿ ತುಳುನಾಡಿನ ಸಾಂಪ್ರದಾಯಿಕ ಶೈಲಿಯ ತಿನಿಸಿಗಳನ್ನು ಸಂಘದ ಎಲ್ಲಾ ಸಿಬ್ಬಂದಿಗಳು ತಮ್ಮ ಮನೆಯಲ್ಲಿ ತಯಾರಿಸಿ ತಂದಿರುತ್ತಾರೆ. ಜೊತೆಗೆ ನಾಟಿ ವೈದ್ಯರನ್ನು ಸನ್ಮಾನಿಸುವ ಮೂಲಕ ತುಳುನಾಡಿನ ಸಂಸ್ಕöತಿ ಹಾಗೂ ಭಾಷೆಯನ್ನು ಬೆಳೆಸುವ ಕೆಲಸಗಳನ್ನು ಸಂಘವು ಮಾಡುತ್ತಿದೆ. ಸಂಘವು “ಆಟಿದ ಪೊಲಬು” ವಿಶಿಷ್ಟವಾದ ಕಾರ್ಯಕ್ರಮವನ್ನು ಆಯೋಜಿಸಿ, ವೇದಿಕೆಯನ್ನು ತುಳುನಾಡಿನ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ ಮಾಡಿರುವುದು ಕಾರ್ಯಕ್ರಮದ ಮೆರಗನ್ನು ಇನ್ನೂ ಹೆಚ್ಚಿಸಿದೆ” ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ನೇತೃತ್ವದಲ್ಲಿ ಹಾಗೂ ಸಮರ್ಥ ಆಡಳಿತ ಮಂಡಳಿಯ ಸೇವೆಯಿಂದ ಸಹಕಾರ ರಂಗದಲ್ಲಿ ಉತ್ತಮ ರೀತಿಯಲ್ಲಿ ಸಾಧನೆಯನ್ನು ಮಾಡುತ್ತಿದೆ . ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಕಮಲ ಕೆ. ಯವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.

ಸಂಘದ ಸದಸ್ಯರಾದ ಉಮಾನಾಥ ಕೋಟೆಕಾರ್ ರವರು ಸ್ವಚ್ಛತೆಯ ಬಗ್ಗೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸಿ ಪರಿಸರವನ್ನು ರಕ್ಷಿಸುವ ಬಗ್ಗೆ ಮಾಹಿತಿ ನೀಡಿದರು..

ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಪೊಲಬು” ಎಂಬ ಹೆಸರಿನಿಂದ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಇದು ಆತ್ಮಶಕ್ತಿ ಕುಟುಂಬದ ಕಾರ್ಯಕ್ರಮ. ಇದರಲ್ಲಿ ನಮ್ಮ ಸಿಬ್ಬಂದಿಗಳು ಅವರ ಮನೆಯಲ್ಲಿ ತಯಾರು ಮಾಡಿದ ರುಚಿ ರುಚಿಯಾದ ತುಳುನಾಡಿನ ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳು, ಭಕ್ಷ ಭೋಜನಗಳನ್ನು ತಂದಿರುತ್ತಾರೆ. ಅಲ್ಲದೇ ಈ ಬಾರಿಯ ವೇದಿಕೆಯನ್ನೂ ಸಹ ವಿಶೇಷವಾಗಿ ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿದೆ. ಈ ಆಟಿದ ಕೂಟದ ಯಶಸ್ವಿಗೆ ಸಹಕರಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಅವರ ಮನೆಯವರಿಗೆ ಧನ್ಯವಾದಗಳನ್ನು ಸಮರ್ಪಣೆ ಮಾಡಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ದಿವಾಕರ್ ಬಿಪಿ, ಗೋಪಾಲ್ ಎಮ್, ಉಮಾವತಿ, ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್.,
ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವಾಧ್ಯಕ್ಷ ವಾಮನ್ ಕೆ, ಅಧ್ಯಕ್ಷ ಗೋಪಾಲ್, ಜೊತೆ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ ರೆಂಜಾಳ, ಮತ್ತಿತರರು ಉಪಸ್ಥಿತರಿದ್ದರು..

ಸಂಘದ ನಿರ್ದೇಶಕರಾದ ಪರಮೇಶ್ವರ ಜಿ. ಪೂಜಾರಿ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ, ವಂದಿಸಿದರು.

ಶಾಖಾಧಿಕಾರಿ ಶ್ರೀಮತಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya
error: Content is protected !!