ಉಜಿರೆ: ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಂತರಿಕ ಗುಣಮಟ್ಟ ಖಾತರಿ ಕೋಶ (IQAC), ಮೂಲ ವಿಜ್ಞಾನ ವಿಭಾಗ ಹಾಗೂ ಗ್ರಂಥಾಲಯ ಮತ್ತು ಸಂಶೋಧನೆ–ಅಭಿವೃದ್ಧಿ ಕೋಶದ ಸಹಯೋಗದಲ್ಲಿ ‘Next-Generation Academia: AI-Enabled Teaching, Research and Innovation’ ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಬೋಧಕ ಅಭಿವೃದ್ಧಿ ಕಾರ್ಯಕ್ರಮ (FDP) ಆಯೋಜಿಸಲಾಗಿದೆ.

ಕಾರ್ಯಕ್ರಮವು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಆ.18ರಂದು ಎಸ್‌ಡಿಎಂಐಟಿ ಉಜಿರೆಯ ಮುಖ್ಯ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.
ಎಸ್‌ಡಿಎಂ ವಿಶ್ವವಿದ್ಯಾಲಯ, ಧಾರವಾಡದ ಪ್ರೊಫೆಸರ್ ಹಾಗೂ ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ ಉದ್ಘಾಟಕರಾಗಿ ಹಾಗೂ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದರು. ಎಸ್‌ಡಿಎಂ ಎಜುಕೇಶನಲ್ ಸೊಸೈಟಿಯ ಸಿಇಒ–ಐಟಿ ಮತ್ತು ಹಾಸ್ಟೆಲ್ ಆಡಳಿತದ ಪೂರಣ್ ವರ್ಮ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು.

ಎಸ್‌ಡಿಎಂಐಟಿ ಪ್ರಾಂಶುಪಾಲರಾದ ಡಾ. ಸಂದೀಪ್ ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ.ರಜತ ಪಿ ಶೆಟ್ಟಿ ಹಾಗೂ ಡಾ.ನವೀನ್ ಕುಮಾರ್ ಉಪಸ್ಥಿತರಿದ್ದರು. ಐದು ದಿನಗಳ ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಬೋಧನೆ, ಸಂಶೋಧನೆ ಮತ್ತು ನಾವೀನ್ಯತೆಯ ಕುರಿತು ವಿವಿಧ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ.
ಜ್ಯೋತಿ ಮತ್ತು ತಂಡದವರು ಪ್ರಾರ್ಥಿಸಿದರು. ಡಾ. ನವೀನ್ ಕುಮಾರ್ ಸ್ವಾಗತಿಸಿದರು. ಡಾ. ರಜತ ಪಿ ಶೆಟ್ಟಿ ವಂದಿಸಿದರು. ರಕ್ಷಿತ್ ಎಸ್.ಕೆ., ಮತ್ತು ಮನಿಷಾ ನಿರೂಪಿಸಿದರು.












