32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳು ಸಾಗಾಟ: ಪೊಲೀಸರ ದಾಳಿ; ಎರಡು ಟಿಪ್ಪರ್ ವಾಹನ ವಶ

ಬೆಳ್ತಂಗಡಿ: ಇಂದಬೆಟ್ಟು ಕಡಿರುದ್ಯಾವರ ಗ್ರಾಮದ ಬೊಳ್ಳೂರು ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿ 2 ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆ ಆ.18 ರಂದು ನಡೆದಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ತಂಡ, ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟಕ್ಕೆ ಸಿದ್ಧವಾಗಿದ್ದ ಟಿಪ್ಪರ್‌ಗಳನ್ನು ವಶಕ್ಕೆ ಪಡೆದರು. ವಶಪಡಿಸಿಕೊಂಡ ವಾಹನಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಾಹನಗಳ ಮಾಲೀಕರು ಮತ್ತು ಚಾಲಕರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೊಳ್ಳೂರು ನದಿ ಪಾತ್ರದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ, ಸ್ಥಳೀಯರಿಂದ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ.

Related posts

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
error: Content is protected !!