31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆ. 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ KA-21-B-0593 ನೋಂದಣಿ ಸಂಖ್ಯೆಯ ಮಹೇಂದ್ರ ಬೊಲೆರೋ ಪಿಕ್‌ಅಪ್ ವಾಹನವನ್ನು ನಿಲ್ಲಿಸಲು ಸೂಚಿಸಲಾಗಿದೆ. ಈ ವೇಳೆ ಚಾಲಕ ವಾಹನವನ್ನು ನಿಲ್ಲಿಸಿ ಕೆಳಗಿಳಿದು ಪರಾರಿಯಾಗಿದ್ದಾನೆ.

ವಾಹನವನ್ನು ಪರಿಶೀಲಿಸಿದಾಗ ಹಿಂಬದಿ ಬಾಡಿಯಲ್ಲಿ ಸುಮಾರು 30 ಬುಟ್ಟಿಯಷ್ಟು ಮರಳು ಪತ್ತೆಯಾಗಿದೆ. ಯಾವುದೇ ಇಲಾಖಾ ಅನುಮತಿ ಪಡೆಯದೆ ಹಾಗೂ ಸರ್ಕಾರಕ್ಕೆ ರಾಜಸ್ವ ಪಾವತಿಸದೆ ಮರಳನ್ನು ಸಾಗಾಟ ಮಾಡಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳಿನ ಅಂದಾಜು ಮೌಲ್ಯ 5,500 ಹಾಗೂ ಪಿಕ್‌ಅಪ್ ವಾಹನದ ಅಂದಾಜು ಮೌಲ್ಯ 2.50 ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪಿಕಪ್ ಚಾಲಕ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಫಾಯಾಜ್ ವಿರುದ್ಧ BNS-2023ರ ಕಲಂ 303(2), MMCR Actನ ಕಲಂ 42, 43, 44 ಹಾಗೂ MMRD Actನ ಕಲಂ 4(1), 4(1A), 21(1)(1A) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!