31.8 C
ಪುತ್ತೂರು, ಬೆಳ್ತಂಗಡಿ
October 3, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ (40) ರಿಕ್ಷಾ ಚಾಲಕರಾಗಿದ್ದು, ಆಗಸ್ಟ್ 15 ರಂದು ಬೆಳಗ್ಗೆ ಸುಮಾರು 10.30ಕ್ಕೆ ಕ್ಷಿತಿಜ್ (14) ಎಂಬಾತನನ್ನು ಆಟೋರಿಕ್ಷಾದಲ್ಲಿ ಆತನ ಮನೆಗೆ ಬಿಡಲು ಮಾಲಾಡಿ–ಗರ್ಡಾಡಿ ಡಾಮಾರು ರಸ್ತೆಯಲ್ಲಿ ತೆರಳುತ್ತಿದ್ದರು. ಬರ್ನ ತಲುಪಿದಾಗ ಕ್ಷಿತಿಜ್‌ನನ್ನು ರಿಕ್ಷಾದಿಂದ ಇಳಿಸಿ, ಆತ ರಸ್ತೆ ದಾಟುತ್ತಿದ್ದ ವೇಳೆ ಅಪ್ರಾಪ್ತ ಬಾಲಕನೊಬ್ಬ ಸಹಸವಾರನನ್ನು ಕುಳ್ಳಿರಿಸಿಕೊಂಡು ಬಂದ ಮೋಟಾರ್ ಸೈಕಲ್ KA-70-L-0120 ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ಷಿತಿಜ್ ರಸ್ತೆಗೆ ಬಿದ್ದು ಹಣೆಗೆ ಹಾಗೂ ಕಾಲಿಗೆ ರಕ್ತಗಾಯಗಳಾಗಿವೆ.ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋಟಾರ್ ಸೈಕಲ್‌ನ್ನು ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 281, 125(ಎ) ಬಿಎನ್‌ಎಸ್ 2023 ಹಾಗೂ ಕಲಂ 199(ಎ) ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!