28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಭಾರತ ವೃತ್ತಿ ಪರೀಕ್ಷೆ : ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.98.4

ಉಜಿರೆ : ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು 2026 ಜುಲೈ ತಿಂಗಳಿನಲ್ಲಿ ನಡೆಸಿದ 2025-26ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇಕಡ 98.4 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಒಟ್ಟು 64 ವಿದ್ಯಾರ್ಥಿನಿಯರು ಹಾಜರಾಗಿದ್ದು, 63 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿರುತ್ತಾರೆ. ಕೋಪಾ( ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್) ಈ ವೃತ್ತಿಯಲ್ಲಿ 25 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು 25 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿ ಶೇಖಡಾ 100 ಫಲಿತಾಂಶ ಬಂದಿರುತ್ತದೆ. ಅದೇ ರೀತಿ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯಲ್ಲಿ 39 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು 38 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿ ಶೇ. 97.4 ಫಲಿತಾಂಶ ಬಂದಿರುತ್ತದೆ. ಅದರಲ್ಲಿ 49 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಹಾಗೂ 14 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕೋಪಾ ವೃತ್ತಿಯ ಮೋಕ್ಷಾ ಎಂ. ಜಿ ಹಾಗೂ ಮೋಕ್ಷಿತಾ (524/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಅಪೇಕ್ಷಾ ಎಂ (518/600) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya
error: Content is protected !!