28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು.

ಪ್ರಸ್ತುತ ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಅವಕಾಶವಿರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜಮೀನನ್ನು ಭೂಪರಿವರ್ತನೆಗೊಳಿಸಿ ವಿನ್ಯಾಸ ಅನುಮೋದನೆ ಪಡೆದು ಮೂಲ ಸರ್ವೆ ನಂಬರ್ ನಮೂದಿಸಿ ನಮೂನೆ 11ಎ ಮತ್ತು 11ಬಿ ನೀಡಲಾಗುತ್ತಿದೆ. ಆದರೆ, ಭೂ ಪರಿವರ್ತನೆ ನಂತರ ಪೋಡಿಯಾಗಿ ಸೃಜಿಸಲಾದ ಹೊಸ ಸರ್ವೆ ನಂಬರನ್ನು ದಾಖಲಿಸಲು ಮತ್ತು ತಪ್ಪಾಗಿ ನಮೂದಿಸಲಾದ ಮಾಲೀಕರ ವಿವರಗಳನ್ನು ತಿದ್ದುಪಡಿ ಮಾಡಲು ಇ-ಸ್ವತ್ತು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲು ಕೋರಿದೆ. ಈ ತರಹದ ಹಲವು ಪ್ರಕರಣಗಳು ಬಾಕಿಯಿದ್ದು, ಇದರಿಂದ ಸಾರ್ವಜನಿಕರಿಗೆ ಆಸ್ತಿ ನೋಂದಣೆಗೆ, ಮಾರಾಟಕ್ಕೆ, ಬ್ಯಾಂಕ್ ಸಾಲ ಇನ್ನಿತರ ಸೌಲಭ್ಯಗಳಿಗೆ ತೀರಾ ಆಡಚಣೆಯಾಗಿರುತ್ತದೆ.

ಈ ಕುರಿತಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರಗಳ ತಿದ್ದುಪಡಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!