25.7 C
ಪುತ್ತೂರು, ಬೆಳ್ತಂಗಡಿ
October 3, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸಿರುವ ಬಾಲಕರ ಅಂತರ ವಲಯ ಯು-23 ಹಾಗೂ ಯು-19 ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಒಟ್ಟು ಮೂವರು ವಿದ್ಯಾರ್ಥಿಗಳು ಮಂಗಳೂರು ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ಯು-23 ತಂಡಕ್ಕೆ ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ಋಷಿ ಬಿ. ಶೆಟ್ಟಿ ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿ ನಿಖಿಲ್ ಐತಾಳ್ ಆಯ್ಕೆಯಾಗಿದ್ದಾರೆ. ಬಾಲಕರ ಯು-19 ತಂಡಕ್ಕೆ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಆಯುಷ್ ಆಚಾರ್ಯ ಆಯ್ಕೆಯಾಗಿದ್ದಾರೆ.

ವಿಶೇಷವಾಗಿ, ಋಷಿ ಬಿ. ಶೆಟ್ಟಿ ಅವರು ಬಾಲಕರ ಯು-23 ಮಂಗಳೂರು ವಲಯ ತಂಡದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya
error: Content is protected !!