28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಸ. ಉ. ಪ್ರಾ. ಶಾಲೆಯಲ್ಲಿ ಪೋಷಕ ರಕ್ಷಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಮಾಲಾಡಿ: ಸ. ಉ. ಪ್ರಾ. ಶಾಲೆ, ಮಾಲಾಡಿಯಲ್ಲಿ ಪೋಷಕ ರಕ್ಷಕ ಸಭೆ ಮತ್ತು ಊರದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.

ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಸ್ವಚ್ಛತೆ, ಆರೋಗ್ಯ, ವೈಯಕ್ತಿಕ ಬೆಳವಣಿಗೆ ಹಾಗೂ ಎಫ್.ಎ. 1 ಪರೀಕ್ಷೆ ಫಲಿತಾಂಶದ ಕುರಿತು ಪೋಷಕರೊಂದಿಗೆ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಚರ್ಚಿಸಿದರು.
ಶಾಲೆಯ ಶೈಕ್ಷಣಿಕ ಹಾಗೂ ಭೌತಿಕ ಅಭಿವೃದ್ಧಿಗೆ ಸದಾ ಬೆಂಬಲವಾಗಿ ನಿಂತು ಅಗತ್ಯ ಸಂದರ್ಭದಲ್ಲಿ ವಿವಿಧ ರೀತಿಯ ಸಹಕಾರ, ದೇಣಿಗೆ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುತ್ತಿರುವ ಊರದಾನಿಗಳಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಮತ್ತು ನಿತ್ಯಾನಂದ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾರಂಕಿ ವಲಯದ ಮೇಲ್ವಿಚಾರಕರಾದ ಕೇಶವ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಕೀಂ, ಉಪಾಧ್ಯಕ್ಷೆ ಶ್ರೀಮತಿ ಶೋಭ ಮತ್ತು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜುಲಿಯಾನ ಶಾಲಿನಿ ಬರೆಟ್ಟೊ ಉಪಸ್ಥಿತರಿದ್ದರು.
ಗೌರವ ಶಿಕ್ಷಕಿ ಶ್ರೀಮತಿ ಚೈತ್ರಾ ಕಾರ್ಯಕ್ರಮಕ್ಕೆ ಸ್ವಾಗತಿಸಿ, ಶ್ರೀಮತಿ ದಿವ್ಯ ವಂದಿಸಿದರು ಹಾಗೂ ಗೌರವ ಶಿಕ್ಷಕಿ ಶ್ರೀಮತಿ ಮಮತಾ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಗಾಂಧಿ ಜಯಂತಿಯ ಪ್ರಯುಕ್ತ ಬೆಳ್ತಂಗಡಿ ಹಿಂದುಳಿದ ವರ್ಗಗಳ ನಿಲಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!