31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಮೇಶ್ ಮದ್ದಡ್ಕ ರವರಿಗೆ ಛಾಯಾರತ್ನ ಪ್ರಶಸ್ತಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಯನ್ನು ಮದ್ದಡ್ಕ ಮನು ಸ್ಟುಡಿಯೋ ಮಾಲಕರಾದ ಉಮೇಶ್ ಮದ್ದಡ್ಕ ಅವರನ್ನು ಬ್ರಹ್ಮಾವರ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ. ಪ್ರಮೋದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ.18ರಂದು ರೋಟರಿ ಕ್ಲಬ್ ಬ್ರಹ್ಮಾವರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.


ಈ ಸಂದರ್ಭ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್ ಬ್ರಹ್ಮಾವರ ವಲಯದ ಅಧ್ಯಕ್ಷರಾದ ಆಲ್ವಿನ್ ಅಂದ್ರಾದೆ, ಕಾರ್ಯದರ್ಶಿ ಪ್ರತೀಷ್ ಕುಮಾರ್, ಕೋಶಾಧಿಕಾರಿ ಹರೀಶ್ ತೆಕ್ಕಟೆ, ಛಾಯಾ ಕಾರ್ಯದರ್ಶಿ ಅಮಿತ್ ತೆಕ್ಕಟೆ, ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್ ದ.ಕ – ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವರಾಜ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ಹೆರಿಕ್ ಡಿಸೋಜ, ಬ್ರಹ್ಮಾವರ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ. ಅರುಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕೌಡಂಗೆ, ವಲಯದ ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಜತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ ಪಾಲ್ಗೊಂಡಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!