28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರನ್ನು ಭೇಟಿಯಾದ ದಲಿತ ನಾಯಕರು

ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಪ್ರಣಾಳಿಕೆಯ ಭಾಗವಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ನೀಡುವ ಬಗ್ಗೆ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ ದಲಿತ ಮುಖಂಡರುಗಳಾದ ಗಣೇಶ್ ಪ್ರಸಾದ್ ಮೂಡಬಿದಿರೆ , ಬಿ.ಕೆ ವಸಂತ್ , ಬೇಬಿ ಸುವರ್ಣ , ವೆಂಕಣ್ಣ ಕೊಯ್ಯೂರು , ನೇಮಿರಾಜ್ ಕಿಲ್ಲೂರು , ರಮೇಶ್ ಆರ್ , ರವಿಚಂದ್ರ ನಾಯ್ಕ್ ಮುಂಡಾಜೆ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಶೇಖರ್ ಲಾಯಿಲ ಉಪಸ್ಥಿತರಿದ್ದರು.

Related posts

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya
error: Content is protected !!