31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು.

ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ ಶಿಕ್ಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿ, ಶಾಲಾ ಆಡಳಿತ, ಶಿಕ್ಷಕ ವರ್ಗ ಹಾಗೂ ಪೋಷಕರ ಮಧ್ಯೆ ಮಕ್ಕಳು ಸೇತುವೆಯಿದ್ದಂತೆ. ಶಾಲೆಯ ಸಕಾರಾತ್ಮಕ ವಿಚಾರವನ್ನು ಹೊರಗಡೆ ಹಾಗೂ ನಕಾರಾತ್ಮಕ ಅಂಶವನ್ನು ಶಾಲೆಗೆ ಸಂಬಂಧಪಟ್ಟವರಿಗೆ ತಿಳಿಸಿದಾಗ ಶಾಲೆಯ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅವರು ಹೇಳಿದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಹೇಮಲತಾ ಎಂ. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು. ಮಕ್ಕಳ ಮುಂದೆ ಹೆತ್ತವರು ತಮ್ಮ ನಡವಳಿಕೆಯಲ್ಲಿಯೇ ಉತ್ತಮ ಮಾದರಿಯಾಗಬೇಕು. ದುಶ್ಚಟಗಳಿಂದ ದೂರವಿದ್ದು, ನೈತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೂ ಅವುಗಳ ಮಹತ್ವವನ್ನು ತಿಳಿಸಬೇಕು. ಪ್ರೀತಿ ಮತ್ತು ಶಿಸ್ತಿನ ಸಮನ್ವಯದೊಂದಿಗೆ ಮಕ್ಕಳನ್ನು ಬೆಳೆಸಿದಾಗ ಅವರಲ್ಲಿ ಆತ್ಮವಿಶ್ವಾಸ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಯುತ್ತದೆ ಎಂದು ಅವರು ಹೇಳಿದರು.

ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೊ ಹಾಗೂ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಪಡ್ಪು ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯಕಾರಿ ಸಮಿತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ರೆಹಮಾನ್ ಪಡ್ಪು ಅವಿರೋಧವಾಗಿ ಆಯ್ಕೆಯಾದರು.

ಇದೇ ಸಂದರ್ಭದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಅವರ ಹೆತ್ತವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ಸ್ವಾಗತಿಸಿದರು. ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ಅವರು 2025–26ನೇ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಉಪನ್ಯಾಸಕಿ ಅಶ್ವಿನಿ ಹಿಂದಿನ ಸಭೆಯ ವರದಿ ವಾಚಿಸಿದರು. ಉಪನ್ಯಾಸಕಿ ಅನಿತಾ ಲೋಬೊ ವಂದಿಸಿದರು. ರೆನಿಟಾ ಕಾರ್ಡೊಜ ಹಾಗೂ ಶೋಭಾ ಕಾರ್ಯಕ್ರಮ ನಿರೂಪಿಸಿದರು.

Related posts

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya
error: Content is protected !!