August 19, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್(ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಆ.19 ರಂದು ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ತಾಂತ್ರಿಕ ಜ್ಞಾನ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ “ನೆಕ್ಸ್ಟ್ ಲನ್೯” ವತಿಯಿಂದ ನೆಕ್ಸ್ಟ್ ಲನ್೯ ಟೆಕ್ನಾಲಜೀಸ್‌ನ ಮುಖ್ಯಸ್ಥ ರಾದ ಸತೀಶ್ ಇವರ ನೇತೃತ್ವದಲ್ಲಿ ವೆಬ್‌ಸೈಟ್ ನಿರ್ಮಾಣ ಕಲಿಕೆಯ ಕುರಿತು ಒಂದು ತಿಂಗಳ ಉಚಿತ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿ ಚಾಲನೆ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸಿಬಾನಿ ಪಾಂಡಿಯವರು ಭಾಗವಹಿಸಿ ಈ ತರಬೇತಿಯ ಮುಖ್ಯ ಉದ್ದೇಶ ವೆಬ್‌ಸೈಟ್ ನಿರ್ಮಾಣದ ಮೂಲಭೂತ ಅಂಶಗಳನ್ನು ಪರಿಚಯಿಸುವುದು ಹಾಗೂ ಆಧುನಿಕ ವೆಬ್‌ಸೈಟ್‌ಗಳನ್ನು ಹೇಗೆ ನಿರ್ಮಿಸುವುದು ಎಂಬುದರ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡುವ ಕುರಿತು ಕಾರ್ಯಕ್ರಮದಲ್ಲಿ ವೆಬ್ ಡೆವಲಪ್‌ಮೆಂಟ್ ಕ್ಷೇತ್ರದ ಪ್ರಮುಖ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಯಿತು.

ತರಬೇತಿಯ ಸಂದರ್ಭದಲ್ಲಿ HTML, CSS ಮತ್ತು JavaScript ಬಳಸಿ ವೆಬ್‌ಸೈಟ್‌ನ ರಚನೆ, ವಿನ್ಯಾಸ ಮತ್ತು ಕಾರ್ಯನಿರ್ವಹಣೆಯನ್ನು ಕಲಿಸಲಾಯಿತು. ಜೊತೆಗೆ React Framework ಮೂಲಕ ಆಧುನಿಕ ಹಾಗೂ ಸಂವಾದಾತ್ಮಕ ಬಳಕೆದಾರ ಸಂಪರ್ಕ ವ್ಯವಸ್ಥೆಗಳನ್ನು ನಿರ್ಮಿಸುವ ಕುರಿತು ತಿಳಿಸಲಾಯಿತು. ದತ್ತಾಂಶ ನಿರ್ವಹಣೆ ಹಾಗೂ ವೆಬ್‌ಸೈಟ್‌ನೊಂದಿಗೆ ಡೇಟಾಬೇಸ್ ಸಂಪರ್ಕಿಸುವ ವಿಧಾನವನ್ನು ಪರಿಚಯಿಸಲಾಯಿತು. ಅಲ್ಲದೆ, ವೆಬ್‌ಸೈಟ್‌ಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸುವ Deployment ಮತ್ತು Hosting ವಿಧಾನಗಳ ಬಗ್ಗೆಯೂ ತರಬೇತಿ ನೀಡಲಾಯಿತು.

ಕಾರ್ಯಕ್ರಮವು ಉಚಿತವಾಗಿದ್ದು, ಯಾವುದೇ ಕೋರ್ಸ್ ಶುಲ್ಕವಿಲ್ಲದೆ ಒಂದು ತಿಂಗಳ ಅವಧಿಯಲ್ಲಿ ಉಪಯುಕ್ತ ಕೌಶಲ್ಯವನ್ನು ಕಲಿಯುವ ಅವಕಾಶವನ್ನು ಒದಗಿಸಿತು. ವಿದ್ಯಾರ್ಥಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಯಿತು.
ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯವನ್ನು ವೃದ್ಧಿಸುವುದರ ಜೊತೆಗೆ ವೆಬ್ ಡೆವಲಪ್‌ಮೆಂಟ್ ಕ್ಷೇತ್ರದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶವನ್ನು ಒದಗಿಸಿತು. ಇಂತಹ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಯುವಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು
ಸಹಕಾರಿಯಾಯಿತು.

Related posts

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಉಜಿರೆ ಬಂಟರ ಸಂಘ ಗ್ರಾಮ ಸಮಿತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!