32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರಿನಿಂದ ಕುಮರಾಜೆ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ (ಆ-20): ತಾಲೂಕಿನ ನಾವೂರು ಗ್ರಾಮದ ಪಲ್ಕೆಯಿಂದ ಕುಮರಾಜೆಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಪರೀತ ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟು, ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಹಲವೆಡೆ ಗುಂಡಿಗಳು ನಿರ್ಮಾಣವಾಗಿದ್ದು, ಕೆಸರು ತುಂಬಿ ಪಾದಚಾರಿಗಳು ಹಾಗೂ ವಾಹನ ಸವಾರರು ಸಂಚರಿಸಲು ಕೂಡ ಕಷ್ಟವಾಗುತ್ತಿದೆ.

ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಆ ಭಾಗದ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದಕ್ಕೂ ಸಮಸ್ಯೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸಮಸ್ಯೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ಅಧ್ಯಕ್ಷರಾದ ಸ್ವಾದಿಕ್ ಕಿರ್ನಡ್ಕ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ, ರಸ್ತೆಯನ್ನು ತುರ್ತಾಗಿ ದುರಸ್ತಿಪಡಿಸುವಂತೆ ಆಗ್ರಹಿಸಿ ನಾವೂರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಯಿತು.

ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಟೊಮಿ ಕುಮರಾಜೆ, SDPI ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಖಾದರ್ ನಾವೂರು, ಬ್ಲಾಕ್ ಕಾರ್ಯದರ್ಶಿ ಸಾದಿಕ್ ನಾವೂರು, ಬ್ರಾಂಚ್ ಕಾರ್ಯದರ್ಶಿ ಸಲೀಂ ಮುರ, ಸದಸ್ಯರಾದ ಅಬೂಸಾಲಿ ಕುಮರಾಜೆ, ಬಶೀರ್ ನಾವೂರ್, ನಿಜಾಮ್ ಉಪಸ್ಥಿತರಿದ್ದರು.

Related posts

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!