32.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ ದಿನಸಿ ಅಂಗಡಿಯಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಂಗಡಿ ಹಾಗೂ ಕಟ್ಟಡವನ್ನು ಆವರಿಸಿದೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಸ್ಪರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಯಿತು. ಆದರೆ ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಸಂಪೂರ್ಣ ದಿನಸಿ ಸಾಮಗ್ರಿಗಳು, ಕಟ್ಟಡ ಹಾಗೂ ಸುಮಾರು 1 ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿವೆ. ಘಟನೆಯಿಂದ 5 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್‌ ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!