32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಅವರ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪ್ರಸ್ತುತ ಉಪ ಮುಖ್ಯಮಂತ್ರಿ , ಕಂದಾಯ ಸಚಿವರಾದ ಡಾ.ಜಿ ಪರಮೇಶ್ವರರವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಬಳಿಕ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ಪ್ರಣಾಳಿಕೆಯ ಭಾಗವಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ನೀಡುವ ಬಗ್ಗೆ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ವಿಧಾನಸಭಾ ಅಧಿವೇಶನ ಮುಗಿದ ನಂತರ ನನ್ನ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಭೆ ಕರೆದು ಚರ್ಚಿಸುವುದಾಗಿ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ , ಆದಿದ್ರಾವಿಡ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮೂಡಬಿದಿರೆ , ದಸಂಸ ಮುಖಂಡರುಗಳಾದ ಬಿ.ಕೆ ವಸಂತ್ , ಬೇಬಿ ಸುವರ್ಣ , ವೆಂಕಣ್ಣ ಕೊಯ್ಯೂರು , ನೇಮಿರಾಜ್ ಕಿಲ್ಲೂರು , ರಮೇಶ್ ಆರ್ , ರವಿಚಂದ್ರ ನಾಯ್ಕ್ ಮುಂಡಾಜೆ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಶೇಖರ್ ಲಾಯಿಲ ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!