30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಗ್ರಾಮದಲ್ಲಿ ಕಲ್ಲಿನ ಗಣಿಗಾರಿಕೆ: ಬರಾಯಕೆರೆಗೆಹಾನಿ- ಸಾರ್ವಜನಿಕರಿಗೆ ತೊಂದರೆ, ಬರಾಯಕೆರೆ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು

ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದರು.

ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದೆ. ಕೃಷಿ ಕೃತಾವಳಿಗಳಿಗೆ ಕಲ್ಲು , ಕಲ್ಲಿನ ಪುಡಿಯಿಂದ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು , ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಮನವಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ‌. ಸಂಬಂಧಪಟ್ಟ ಇಲಾಖೆಗಳಿಗೆ ತಪ್ಪು ಮಾಹಿತಿ ನೀಡಿ ಕೃಷಿ ಚಟುವಟಿಕೆ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದರೂ ಯಾವುದೇ ಇಲಾಖೆಗಳು ಕಾನೂನು ಕ್ರಮ ಕೈಗೊಂಡಿಲ್ಲ ಎಂದು ತಮ್ಮ ನೋವು ಜಿಲ್ಲಾಧಿಕಾರಿಗಳ ಮುಂದೆ ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಶಾಂತ್ ವೇಗಸ್ , ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ , ಹರೀಶ್ ಪೂಜಾರಿ , ಗಣೇಶ್ ದೇವಾಡಿಗ , ಮೇಲ್ವಿನ್ ಡಿಸೋಜ , ಪ್ರವೀಣ್ ನಿನ್ನಿಕಲ್ಲು , ಜೋನ್ ಡಿಸೋಜ , ದಿನೇಶ್ ಪೂಜಾರಿ , ಕೂಸ ಅಳದಂಗಡಿ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya
error: Content is protected !!