32.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣಕ್ಕೆ ಕಳುಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ ‘ಆರೋಗ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಹಿನ್ನೆಲೆಯಲ್ಲಿ ತಾಲೂಕಿನ ಹೆಮ್ಮೆಯ ಪುತ್ರ ಸುಮಂತ್ ಕುಮಾರ್ ಜೈನ್ ಅವರ ಶೈಕ್ಷಣಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಶೈಕ್ಷಣಿಕ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ಉನ್ನತ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಸಾಧನೆಯನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಸಿ. ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚರ್ ಹಾಗೂ ಬದ್ರುದ್ದಿನ್ ಕಾಜೂರು, ಕಾರ್ಯದರ್ಶಿ ಅಶ್ರಫ್ ಲಾಯಿಲ ಮತ್ತು ಚಾರ್ಮಾಡಿ ಪಂಚಾಯತ್ ಮಾಜಿ ಸದಸ್ಯ ಫ್ರಾನ್ಸಿಸ್ ಉಪಸ್ಥಿತರಿದ್ದರು.

Related posts

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya
error: Content is protected !!