30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್ 19ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿದಾಗ, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಆತನನ್ನು ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ(34) ಎಂದು ಗುರುತಿಸಲಾಗಿದೆ.

ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ NDPS ಕಾಯ್ದೆಯ ಕಲಂ 27(b), 22 ಮತ್ತು 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!