32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ತರಗತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಘೋಷಿಸಲಾಗಿದ್ದ ಮಳೆ ರಜೆ ದಿನಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆಗಳನ್ನು ಘೋಷಿಸಿರುತ್ತಾರೆ. ಈವರೆಗೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕುಗಳಿಗೆ ಒಟ್ಟು ಎಂಟು ಪೂರ್ಣ ದಿನಗಳು ಮತ್ತು ಒಂದು ಅರ್ಧ ದಿನದ ರಜೆಯನ್ನು ಘೋಷಿಸಲಾಗಿರುತ್ತದೆ ಮತ್ತು ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ವಲಯಗಳಿಗೆ ಒಟ್ಟು ಒಂಭತ್ತು ಪೂರ್ಣ ದಿನಗಳ ರಜೆಗಳನ್ನು ಘೋಷಿಸಲಾಗಿರುತ್ತದೆ. ಈ ರಜಾ ದಿನಗಳಲ್ಲಿ ಕೊರತೆಯಾಗಿರುವ ಬೋಧನಾ ಅವಧಿಗಳನ್ನು ಸರಿದೂಗಿಸಲು ಅಗಸ್ಟ್ ತಿಂಗಳ ಮೂರನೇ ವಾರದಿಂದ ಆರಂಭವಾಗಿ ಶನಿವಾರ ಅಪರಾಹ್ನ ಪೂರ್ಣ ತರಗತಿಗಳನ್ನು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಇತರೆ ದಿನಗಳಲ್ಲಿ ಹೆಚ್ಚುವರಿಯಾಗಿ ಸಂಜೆ ಅವಧಿಯಲ್ಲಿ ಒಂದು ಬೋಧನಾ ಅವಧಿ ನಡೆಸಲು ಸೂಚಿಸಿದೆ.


ಪ್ರತಿ ಶಾಲೆಯಲ್ಲಿ ಮಳೆ ರಜೆ ಲೆಕ್ಕಾಚಾರವನ್ನು ಇಟ್ಟು ಹೊಂದಾಣಿಕೆ ಮಾಡಿಕೊಳ್ಳುವ ಅವಧಿಗಳನ್ನು ಲೆಕ್ಕಾಚಾರ ಮಾಡಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಎಸ್‌ಡಿಎಂಸಿ ಅವರೊಂದಿಗೆ ಚರ್ಚಿಸಿ ದಿನಗಳನ್ನು ನಿರ್ಧರಿಸಿ ವೇಳಾಪಟ್ಟಿಯಲ್ಲಿ ದಾಖಲಿಸಿ ಶೈಕ್ಷಣಿಕ ಮಾರ್ಗಸೂಚಿಯಂತೆ ಬೋಧನಾ ದಿನಗಳನ್ನು ಸರಿದೂಗಿಸಲುಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya
error: Content is protected !!