24.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಬೆಳ್ತಂಗಡಿ ತಹಶೀಲ್ದಾರ್ ಎನ್.ಎಸ್ ನರಗುಂದ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ಭೂಮಾಲೀಕ , ನ್ಯಾಯವಾದಿಯಾಗಿರುವ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದೆ. ಕೃಷಿ ಕೃತಾವಳಿಗಳಿಗೆ ಕಲ್ಲು , ಕಲ್ಲಿನ ಪುಡಿಯಿಂದ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು , ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ತಹಶೀಲ್ದಾರರ ಜೊತೆಗೆ ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಇನ್ನೊಮ್ಮೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆಗೆ ಭೇಟಿ ನೀಡುವ ಬರವಸೆ ನೀಡಿದರು.

ತಹಶೀಲ್ದಾರರ ಜೊತೆಗೆ ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ , ಅಳದಂಗಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪೂವಪ್ಪ ಮಲೆಕುಡಿಯ , ಪಿಲ್ಯ ಗ್ರಾಮಾಡಳಿತಾಧಿಕಾರಿ ಭಾರತಿ ಇದ್ದರು.ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಶಾಂತ್ ವೇಗಸ್ , ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ , ಹರೀಶ್ ಪೂಜಾರಿ , ಗಣೇಶ್ ದೇವಾಡಿಗ , ಮೇಲ್ವಿನ್ ಡಿಸೋಜ , ಪ್ರವೀಣ್ ನಿನ್ನಿಕಲ್ಲು , ಜೋನ್ ಡಿಸೋಜ , ದಿನೇಶ್ ಪೂಜಾರಿ , ಪ್ರಶಾಂತ್ ಪೂಜಾರಿ ಕೂಸ ಅಳದಂಗಡಿ ಮತ್ತಿತರರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಮುದಾಯ ಭವನ ನಿರ್ಮಾಣದ ಪೂರ್ವಭಾವಿ ಸಮಾಲೋಚನಾ ಸಭೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

Suddi Udaya
error: Content is protected !!