30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ ಸಂಭ್ರಮ’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಸೈಂಟ್ ಜಾರ್ಜ್ ಪದವಿಪೂರ್ವ ಕಾಲೇಜು, ನೆಲ್ಯಾಡಿಯ ಇತಿಹಾಸ ಉಪನ್ಯಾಸಕ ವಿಶ್ವನಾಥ ಕೆ. ಶೆಟ್ಟಿ ಭಾಗವಹಿಸಿ, ಆಟಿ ತಿಂಗಳ ವೈಶಿಷ್ಟ್ಯ, ತುಳುನಾಡಿನ ಜನಪದ ಸಂಸ್ಕೃತಿ ಹಾಗೂ ಹಿರಿಯರು ಉಳಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನು ವಿವರಿಸಿದರು. ಆಧುನಿಕ ಜೀವನಶೈಲಿಯ ನಡುವೆ ನಮ್ಮ ನೆಲದ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಸಂರಕ್ಷಿಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪಠ್ಯಜ್ಞಾನದ ಜೊತೆಗೆ ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಜೀವನಮೌಲ್ಯಗಳ ಪರಿಚಯವನ್ನು ನೀಡುತ್ತವೆ. ನಮ್ಮ ಮಣ್ಣಿನ ಬೇರುಗಳನ್ನು ಅರಿತುಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಜವಾಬ್ದಾರಿ ಬೆಳೆಸಬಹುದು ಎಂದರು.

ಸಾಹಿತ್ಯ ಸಂಘದ ನಿರ್ದೇಶಕ ವಸಂತ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಪಲ್ಲವಿ ವಂದಿಸಿದರು, ಆರಿಫಾ ಬಾನು ಕಾರ್ಯಕ್ರಮವನ್ನು ನಿರ್ವಹಿಸಿದರು.


ಆಟಿ ಸಂಭ್ರಮದ ವಿಶೇಷ ಆಕರ್ಷಣೆಯಾಗಿ ವಿಶ್ವನಾಥ ಕೆ. ಶೆಟ್ಟಿ ಹಾಗೂ ಅವರ ಪುತ್ರಿ ಸಾಯಿ ಧೃತಿ ಶೆಟ್ಟಿ ಅವರು ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ತುಳುನಾಡಿನ ಪರಂಪರೆಯ ಸೊಗಡು, ಸಾಹಿತ್ಯದ ಕಂಪು, ಸಂಗೀತದ ಮಾಧುರ್ಯ ಹಾಗೂ ಪರಿಸರ ಪ್ರಜ್ಞೆಯನ್ನು ಒಂದೇ ವೇದಿಕೆಯಲ್ಲಿ ಬೆಸೆದ ಈ ಆಟಿ ಸಂಭ್ರಮವು ವಿದ್ಯಾರ್ಥಿಗಳಲ್ಲಿ ತಮ್ಮ ನೆಲ, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂತು.

Related posts

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!