24.8 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸದ್ಭಾವನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿ, ಸದ್ಭಾವನಾ ದಿನದ ಪ್ರಮಾಣ ವಚನವನ್ನು ಬೋಧಿಸಿದರು. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ, ಏಕತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಹಾಗೂ ಸಹಕಾರ್ಯಕ್ರಮಾಧಿಕಾರಿ ಕು. ಶ್ರಾವ್ಯ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.ಸದ್ಭಾವನೆ, ಸಹೋದರತ್ವ ಮತ್ತು ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Related posts

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!