24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ರೂ.1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದ ಅನ್ನಛತ್ರ ಕಟ್ಟಡದ ಒಂದನೇ ಮಹಡಿಯಲ್ಲಿ ಹೆಚ್ಚುವರಿ ಅನ್ನಛತ್ರ ಹಾಲ್, ಲಿಫ್ಟ್ ಹಾಗೂ ಗೂಡ್ಸ್ ಲಿಫ್ಟ್ ರೂಮ್ ನಿರ್ಮಾಣ ಸೇರಿದಂತೆ ₹99.75 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ₹25 ಲಕ್ಷ ವೆಚ್ಚದ ಅಂಗಡಿ ಮಳಿಗೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದ ಬಳಿಕ, ಬೆಂಗಳೂರಿನ ಅನ್ನಪೂರ್ಣೇಶ್ವರಿ ಎಂಟರ್‌ಪ್ರೈಸಸ್ ಹಾಗೂ ಡೆವಲಪರ್‌ನ ಗುತ್ತಿಗೆದಾರ ಹರೀಶ್ ಅವರಿಗೆ ವರ್ಕ್ ಆರ್ಡರ್ ನೀಡಲಾಯಿತು.

ಇದೇ ಸಂದರ್ಭದಲ್ಲಿ ದಿವಂಗತ ಎ.ಎಂ. ಮುನಿಯಪ್ಪ ಮತ್ತು ಮುನಿತಾಯಮ್ಮ, ಯಶವಂತಪುರ ಇವರ ಸ್ಮರಣಾರ್ಥ ಮಮತಾ ಸುರೇಂದ್ರ, ಗಂಗಾನಗರ, ಬೆಂಗಳೂರು ಅವರು ಕ್ಷೇತ್ರದ ಅನ್ನಛತ್ರಕ್ಕೆ 10 ಕೆ.ವಿ. ತ್ರೀ-ಫೇಸ್ ಜನರೇಟರ್ ಕೊಡುಗೆಯಾಗಿ ನೀಡಿದ್ದು, ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ವಿಶ್ವನಾಥ ಕೊಲ್ಲಾಜೆ, ಪ್ರಶಾಂತ್ ಕುಮಾರ್ ಮಚ್ಚಿನ, ಲೋಕೇಶ್ವರಿ ವಿನಯಚಂದ್ರ ವಳಂಬ್ರ, ಪ್ರಮೋದ್ ಕುಮಾರ್ ರೆಖ್ಯ, ಗಣೇಶ್ ಕಾಶಿ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಶಾಂತ್ ರೈ ಗೋಳಿತೊಟ್ಟು, ವಿಶ್ವನಾಥ ಶೆಟ್ಟಿ ಶ್ರೀ ಮಾತಾ, ಗಣೇಶ್ ಪಿಜಿನಡ್ಕ, ಗುತ್ತಿಗೆದಾರ ಹರೀಶ್, ರೈತ ಸಂಘದ ಮುಖಂಡ ರೂಪೇಶ್ ರೈ ಅಲಿಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya
error: Content is protected !!