30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

“ಇಂದಿನ ಯುವ ಜನಾಂಗ ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆಯುತ್ತಿದ್ದಾರೆ, ಸವಾಲನ್ನು ಎದುರಿಸುವ ಗುಣ, ನೈತಿಕ ಪ್ರಜ್ಞೆ, ಮತ್ತು ಆತ್ಮವಿಶ್ವಾಸದ ಕೊರತೆ ಅವರಲ್ಲಿ ಎದ್ದು ಕಾಣುತ್ತಿದೆ. ಹಾಗಾಗಿ ಈ ತಲೆಮಾರು ನಾಯಕತ್ವದ ಗುಣದ ಜೊತೆಗೆ ವಿವೇಚನೆಯನ್ನೂ ಬೆಳೆಸಿಕೊಳ್ಳಬೇಕು” ಎಂಬುದಾಗಿ ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಂಕರ್ ರಾವ್. ಬಿ ಅವರು ಕರೆಯಿತ್ತರು.

ಅವರು ಆ. 20ರಂದು ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರು ಇಲ್ಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ| ಡಾ | ಸ್ಟಾನಿ ಗೋವಿಯಸ್ ಅವರು ವಿದ್ಯಾರ್ಥಿ ನಾಯಕರಿಗೆ ಶುಭಾಶಯಗಳ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ನೆಲ್ಸನ್ ಲಸ್ರಾದೊ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಲ್ಸನ್ ರೂಪೇಶ್ ಮೊರಾಸ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು.ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ ಪ್ರಕಾಶ್ ಕ್ರಮಧಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಅವಿನಾಶ್ ಲೋಬೊ ಮತ್ತು ವಿಯೋಲಾ ಸೆರಾವೋ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ ವಿದ್ಯಾರ್ಥಿ ಪ್ರತಿನಿಧಿ ಕು. ಪ್ರಜ್ವಿತಾ ಅವರ ಧನ್ಯವಾದವಿತ್ತರು.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya
error: Content is protected !!