30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

ಬೆಳ್ತಂಗಡಿ: ಉಜಿರೆ–ಬೆಳಾಲು ಸಂಪರ್ಕಿಸುವ ಓಡಲ ರಸ್ತೆಯಲ್ಲಿರುವ ರಸ್ತೆ ದಿಣ್ಣೆಯಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಓಡಲ ರಸ್ತೆಯಲ್ಲಿರುವ ರಸ್ತೆ ದಿಣ್ಣೆಗೆ ಯಾವುದೇ ಬಿಳಿ ಬಣ್ಣ ಬಳಿದಿಲ್ಲ. ಅಲ್ಲದೆ, ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಸ್ಪಷ್ಟವಾಗಿ ಕಾಣುವಂತೆ ರಿಪ್ಲೆಕ್ಟರ್‌ಗಳನ್ನೂ ಅಳವಡಿಸಲಾಗಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ರಸ್ತೆ ದಿಣ್ಣೆ ಗಮನಕ್ಕೆ ಬಾರದೆ ವಾಹನಗಳು ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ದಿಣ್ಣೆ ಸೂಕ್ತವಾಗಿ ಗುರುತಿಸುವಂತಿಲ್ಲದಿರುವುದು ಅಪಾಯಕ್ಕೆ ಕಾರಣವಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ಅಗತ್ಯವಿರುವ ರಿಪ್ಲೆಕ್ಟರ್‌ಗಳನ್ನು ಅಳವಡಿಸುವ ಮೂಲಕ ವಾಹನ ಸವಾರರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!