30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಸುಮಂತ್ (15) ಸಂಶಯಾಸ್ಪದ ಸಾವು ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.

ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಕುಟುಂಬದ ಐವರನ್ನು ಈಗಾಗಲೇ ಬೆಂಗಳೂರಿಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿದೆ. ಆ.10ರಂದು ಸುಮಂತ್ ತಂದೆ ಸುಬ್ರಹ್ಮಣ್ಯ ನಾಯಕ್ ಹಾಗೂ ತಾಯಿ ರತ್ನಾವತಿ ಅವರನ್ನು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಳಿಕ ಸುಮಂತ್ ಸಹೋದರ ಸುದರ್ಶನ್ ಅವರನ್ನು ಮಧ್ಯಾಹ್ನದಿಂದ ಸಂಜೆಯವರೆಗೆ ಪ್ರಶ್ನಿಸಲಾಗಿದೆ.

ಆ.11ರಂದು ರತ್ನಾವತಿ ಸಹೋದರ ರಾಧಾಕೃಷ್ಣ ಹಾಗೂ ಸಂಬಂಧಿ ಲಕ್ಷ್ಮೀನಾರಾಯಣ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಈ ಐವರಿಂದ ಪಡೆದ ಉತ್ತರಗಳು ಹಾಗೂ ತನಿಖೆ ವೇಳೆ ದಾಖಲಾದ ಮಾಹಿತಿಯನ್ನು ತಾಳೆಹಾಕಿ ಪರಿಶೀಲಿಸುವ ಕಾರ್ಯವನ್ನು ತಜ್ಞರು ನಡೆಸುತ್ತಿದ್ದಾರೆ.

ಮುಂದಿನ ಹಂತದ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಪ್ರಕರಣದಲ್ಲಿ ಗುರುತಿಸಲಾಗಿರುವ ಇತರ ಶಂಕಿತರನ್ನೂ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೊಳಪಡಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.

Related posts

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!