23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’: ತುಳುನಾಡಿನ ಸಂಸ್ಕೃತಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ: ಅನಿಲ್ ಕುಮಾರ್:

ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ–ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಬೆಳ್ತಂಗಡಿ, ಪ್ರಗತಿಬಂಧು ಒಕ್ಕೂಟ ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಇದರ ಸಂಯುಕ್ತ ಆಶ್ರಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭಾನುವಾರ ಜೈನ್‌ಪೇಟೆ ದೊಡ್ಡಮನೆ ಗದ್ದೆಯಲ್ಲಿ ನಡೆದ ‘ಕೆಸರ್‌ದ ಕಂಡೊಡೊಂಜಿ ದಿನ’ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

“ಒಂದು ಕಾಲದಲ್ಲಿ ಮುಳಿಹುಲ್ಲಿನ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕುಟುಂಬಗಳು ಇಂದು ಆರ್ಥಿಕವಾಗಿ ಸಬಲಗೊಂಡು ಅದೇ ಮನೆಯಲ್ಲಿ ದುಬಾರಿ ಕಾರು ನಿಲ್ಲಿಸುವಂತಹ ಬದಲಾವಣೆಗೆ ಸಾಕ್ಷಿಯಾಗಿವೆ. ಈ ಪರಿವರ್ತನೆಯ ಹಿಂದೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡಲಾಗುತ್ತಿರುವ ಆರ್ಥಿಕ ಭದ್ರತೆ, ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಸೌಲಭ್ಯಗಳ ಕೊಡುಗೆಯಿದೆ” ಎಂದರು.

ರಾಜ್ಯಾದ್ಯಂತ ಎರಡು ಕೋಟಿಗೂ ಅಧಿಕ ಮಂದಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಪ್ರಯೋಜನ ಪಡೆಯುತ್ತಿದ್ದಾರೆ. ಸುಮಾರು 44 ಸಾವಿರ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಭಿವೃದ್ಧಿ ಚಟುವಟಿಕೆಗಳ ಜತೆಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಬದುಕಿನೊಂದಿಗೆ ಬೆರೆಯುವ ಅವಕಾಶ:- ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಮಾತನಾಡಿ, ರಜಾದಿನಗಳಲ್ಲಿ ಹೆಚ್ಚಿನವರು ಮಾಲ್‌ ಹಾಗೂ ಪಟ್ಟಣ ಪ್ರದೇಶಗಳಿಗೆ ತೆರಳಲು ಆಸಕ್ತಿ ತೋರುತ್ತಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಇಂತಹ ಸಾಂಸ್ಕೃತಿಕ ಹಾಗೂ ಕೃಷಿ ಆಧಾರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿಯೂ ದೊರೆಯುತ್ತದೆ. ಮಣ್ಣಿನೊಂದಿಗೆ ಬೆರೆಯುವ ಇಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯ ಪರಿಚಯವನ್ನು ಗಟ್ಟಿಗೊಳಿಸುತ್ತವೆ ಎಂದರು.

ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಶುಭ ಕೋರಿದರು. ವೇದಿಕೆಯಲ್ಲಿ ಬೆಳ್ತಂಗಡಿ ಭಜನಾ ಪರಿಷತ್ ಅಧ್ಯಕ್ಷ ರವೀಂದ್ರ, ಗದ್ದೆಯಲ್ಲಿ ಸ್ಥಳಾವಕಾಶ ಒದಗಿಸಿದ ಪ್ರಗತಿಪರ ಕೃಷಿಕ ಸತೀಶ್ ಶೆಟ್ಟಿ ದೊಡ್ಡಮನೆ, ರತ್ನಮಾನಸ ಜೀವನ ಶಿಕ್ಷಣ ಕೇಂದ್ರದ ಮೇಲ್ವಿಚಾರಕ ಯತೀಶ್ ಬಳಂಜ, ಜಯಲಕ್ಷ್ಮಿ ದೊಡ್ಡಮನೆ ಉಪಸ್ಥಿತರಿದ್ದರು.ವಿವಿಧ ವಲಯಗಳ ಒಕ್ಕೂಟದ ಅಧ್ಯಕ್ಷರು, ಸೇವಾನಿರತರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಯೋಜನೆಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗಾಗಿ ಕೆಸರು ಗದ್ದೆ ಓಟ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆ, ಸಾಂಸ್ಕೃತಿಕ ಮತ್ತು ಮನರಂಜನಾ ಸ್ಪರ್ಧೆಗಳನ್ನು ನಡೆಯಿತು.

ಯುವಜನತೆ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕೆಸರು ಗದ್ದೆಯ ಆಟೋಟಗಳ ಮೂಲಕ ಗ್ರಾಮೀಣ ಬದುಕಿನ ಸಂಭ್ರಮವನ್ನು ಅನುಭವಿಸಿದರು. ಕೆಸರು ಗದ್ದೆಯಲ್ಲೇ ವಿವಿಧ ವಲಯದ ಸದಸ್ಯರು ಆಕರ್ಷಕ ನೃತ್ಯ ಪ್ರದರ್ಶನ ನಡೆಸಿಕೊಟ್ಟರು.ಗ್ರಾ‌. ಯೋ ಜಿಲ್ಲಾನಿರ್ದೇಶಕ ದಿನೇಶ್ ಸ್ವಾಗತಿಸಿದರು. ಯೋಜನಾಧಿಕಾರಿ ಯಶೋಧರ ವಂದಿಸಿದರು. ಕೃಷಿ ವಿಭಾಗದ ಯೋಜನಾಧಿಕಾರಿ ರಾಮ್‌ಕುಮಾರ್ ಹಾಗೂ ವಿನ್ಯಾಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಫುಟ್ಬಾಲ್ ಪಂದ್ಯಾಟ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

Suddi Udaya
error: Content is protected !!