28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ಆ.22 ರಂದು ನಡೆದ  ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ. ಆರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ, ಗೋಪಾಲ್ ಎಮ್. ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya
error: Content is protected !!