28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ಎಸ್‌ಡಿಎಂ ಕಲಾಭವನ ಬೆಳ್ತಂಗಡಿಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾದ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಮುಖ್ಯ ಅಧಿಕಾರಿ ಧನ್ಯ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟವನ್ನು ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಪ್ರಭಾಕರ್ ಎಸ್ ಉದ್ಘಾಟಿಸಿ ಆಗಮಿಸಿದ ಸ್ಪರ್ಧಿಗಳಿಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಶ್ರೀಮತಿ ಹೇಮಲತಾ ಎಂ ಆರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಮೇಶ್ ಹೆಚ್ ಮತ್ತು ಬೆಳ್ತಂಗಡಿ ತಾಲೂಕು ನಿಕಟ ಪೂರ್ವ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಶ್ರೀಮತಿ ಸುಜಯ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕಿನ ವಿವಿಧ ಶಾಲೆಯ ದೈಹಿಕ ಶಿಕ್ಷಕರು ಮತ್ತು ಚೆಸ್ ಸ್ಪರ್ಧಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದರು.


ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಶ್ರೀಮತಿ ಅಮಿತಾ ಸ್ವಾಗತಿಸಿದರು, ಸಹ ಶಿಕ್ಷಕ ಶೇಯಾಂಸ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya
error: Content is protected !!