33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ತೆರಳಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಹಣ್ಣುಹಂಪಲು ವಿತರಿಸಿದರು. ಹುಟ್ಟುಹಬ್ಬದ ಆಚರಣೆಯನ್ನು ಸಮಾಜಮುಖಿ ಹಾಗೂ ಮಾನವೀಯ ಸೇವೆಯೊಂದಿಗೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸಂದೇಶ ನೀಡಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿ ಅಧ್ಯಕ್ಷ ಅಜರ್ ನಾವೂರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಅರುಣ್ ಫರ್ನಾಂಡಿಸ್, ಪಕ್ಷದ ಪ್ರಮುಖರಾದ ಜೋಶಿಲ್ ಲಾಯಿಲಾ, ಸುಧೀರ್ ದೇವಾಡಿಗ ಹಾಗೂ ಸ್ಟೀವನ್ ಮೋನಿಸ್ ಉಪಸ್ಥಿತರಿದ್ದರು.

ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಈ ಸೇವಾ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!