28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೀತ ಗಾಯನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಬಹುಮಾನ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ ಪದವಿಪೂರ್ವ ಕಾಲೇಜು, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 23ರಂದು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಯ ಶಾಲೆಗಳ ಸ್ಕೌಟ್ಸ್–ಗೈಡ್ಸ್ ಹಾಗೂ ಕಬ್ಸ್–ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು. ಗೈಡ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ, ಕಬ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬುಲ್‌ಬುಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಗೈಡ್ಸ್ ಹಾಗೂ ಕಬ್ಸ್ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿ, ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭಹಾರೈಸಿದರು.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya
error: Content is protected !!