25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

ಬೆಳ್ತಂಗಡಿ: ಗೆಜ್ಜೆಗಿರಿ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಗೆಜ್ಜೆಗಿರಿ ಕ್ಷೇತ್ರದ ಪದಾಧಿಕಾರಿಗಳು ಭೇಟಿಯಾಗಿ ಮಾಹಿತಿ ನೀಡಿ, ಅಗತ್ಯ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು.

ಕ್ಷೇತ್ರದ ಕಾನೂನು ಸಲಹೆಗಾರರಾದ ರಕ್ಷಿತ್ ಶಿವರಾಮ್ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿಯಾದ ನಿಯೋಗವು, ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆಯುತ್ತಿರುವ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಸ್ತುತ ಪ್ರಗತಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಕೇಂದ್ರದ ಮಹತ್ವದ ಕುರಿತು ಸಚಿವರಿಗೆ ವಿವರಿಸಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಪೂಜಾರಿ ಬಿರುವ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್, ಹರೀಶ್ ಕೆ ಪೂಜಾರಿ ಬೈಲಬರಿ, ನಾರಾಯಣ ಮಚ್ಚಿನ, ಸತೀಶ್ ಕಾಶಿಪಟ್ಟಣ ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿ ಹಾಗೂ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರದ ಉದ್ದೇಶಗಳ ಸಾಕಾರಕ್ಕೆ ಸರ್ಕಾರದ ಸಹಕಾರ ದೊರೆಯುವ ವಿಶ್ವಾಸವನ್ನು ಕ್ಷೇತ್ರದ ಪದಾಧಿಕಾರಿಗಳು ವ್ಯಕ್ತಪಡಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya
error: Content is protected !!